Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:22 - ಪರಿಶುದ್ದ ಬೈಬಲ್‌

22 ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ಇಸ್ರಾಯೇಲ್‍ದೇವರ ಆಲಯವನ್ನು ಕಟ್ಟುವದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯ ಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:22
20 ತಿಳಿವುಗಳ ಹೋಲಿಕೆ  

ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ಇಸ್ರೇಲಿನ ಜನರೂ ಅಲ್ಲಿ ಸೇರಿಬಂದವರೂ ಪಸ್ಕಹಬ್ಬವನ್ನು ಮತ್ತು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಂದು ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವು ನಿನಗಾಗಿ ಪಸ್ಕಹಬ್ಬದ ಊಟವನ್ನು ಎಲ್ಲಿ ಸಿದ್ಧಪಡಿಸಬೇಕು?” ಎಂದು ಕೇಳಿದರು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು.


ತನಗಿಂತ ಮೊದಲು ರಾಜರಾಗಿದ್ದವರ ವೃತ್ತಾಂತ ಪುಸ್ತಕಗಳನ್ನು ತರಿಸಿ ದಾರ್ಯಾವೆಷನು ಶೋಧಿಸಿದನು. ಈ ಪುಸ್ತಕಗಳು ರಾಜ ಖಜಾನೆಯಲ್ಲಿ ಇಡಲ್ಪಟ್ಟಿದ್ದವು.


ಇದೆಲ್ಲಾ ನಡೆಯುತ್ತಿರುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ನಾನು ಬಾಬಿಲೋನಿನ ಅರಸನ ಬಳಿಗೆ ಹಿಂತಿರುಗಿದ್ದೆನು. ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅವನ ಬಳಿಗೆ ಹೋದೆನು. ಸ್ವಲ್ಪಕಾಲವಾದ ಬಳಿಕ ಅರಸನ ಅಪ್ಪಣೆಯೊಂದಿಗೆ ನಾನು ಹಿಂತಿರುಗಿ ಜೆರುಸಲೇಮಿಗೆ ಬಂದೆನು.


ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು ಮತ್ತು ಅಶ್ವರೂಢರು ಆಗಿರುವರು.


ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.


ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು