ಎಜ್ರ 6:4 - ಪರಿಶುದ್ದ ಬೈಬಲ್4 ಅದರ ಗೋಡೆಯಲ್ಲಿ ಮೂರುಸಾಲು ದೊಡ್ಡ ಗಾತ್ರದ ಕಲ್ಲುಗಳಿರಬೇಕು; ಒಂದು ಸಾಲಿನಲ್ಲಿ ಮರದ ತೊಲೆಗಳಿರಬೇಕು. ದೇವಾಲಯ ಕಟ್ಟಲು ತಗಲುವ ಖರ್ಚುವೆಚ್ಚವೆಲ್ಲವನ್ನು ರಾಜನ ಖಜಾನೆಯಿಂದ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ, ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ಇದರ ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೊಡ್ಡ ಕಲ್ಲುಗಳ ಮೂರು ಸಾಲುಗಳೂ, ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆಯ ಬೊಕ್ಕಸದಿಂದ ಕೊಡಲಾಗುವುದು. ಅಧ್ಯಾಯವನ್ನು ನೋಡಿ |
ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.
ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.