ಎಜ್ರ 6:5 - ಪರಿಶುದ್ದ ಬೈಬಲ್5 ಬೆಳ್ಳಿಬಂಗಾರಗಳ ವಸ್ತುಗಳೆಲ್ಲವನ್ನು ಜೆರುಸಲೇಮಿನ ದೇವಾಲಯದಿಂದ ನೆಬೂಕದ್ನೆಚ್ಚರನು ಸೂರೆಮಾಡಿ ಬಾಬಿಲೋನಿಗೆ ತಂದದ್ದನ್ನು ದೇವಾಲಯದಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದಲ್ಲದೆ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಬಂದ ಬೆಳ್ಳಿಬಂಗಾರದ ದೇವಸ್ಥಾನದ ಪಾತ್ರೆಗಳನ್ನು ಹಿಂದಕ್ಕೆ ಕೊಡಬೇಕು. ಅವುಗಳನ್ನೆಲ್ಲ ಮೊದಲಿದ್ದ ಸ್ಥಳಕ್ಕೆ ಅಂದರೆ, ಜೆರುಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇವಿುನ ದೇವಾಲಯದಿಂದ ಬಾಬೆಲಿಗೆ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರದ ದೇವಸ್ಥಾನಪಾತ್ರೆಗಳನ್ನು ತಿರಿಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇವಿುನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು ಎಂಬದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದುಕೊಂಡು ಬಾಬಿಲೋನಿಗೆ ಒಯ್ದ ದೇವರ ಆಲಯದ ಬೆಳ್ಳಿಬಂಗಾರದ ಸಲಕರಣೆಗಳನ್ನು ತಿರುಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತೆಗೆದುಕೊಂಡುಹೋಗಿ, ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”
ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.