Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:8 - ಪರಿಶುದ್ದ ಬೈಬಲ್‌

8 ಈಗ ನಾನು ನಿಮಗೆ ಕೊಡುವ ಆಜ್ಞೆ ಏನೆಂದರೆ, ದೇವಾಲಯ ಕಟ್ಟುವ ಯೆಹೂದ್ಯ ನಾಯಕರಿಗೆ ನೀವು ಸಂಪೂರ್ಣ ಖರ್ಚನ್ನು ಸರಕಾರದ ಖಜಾನೆಯಿಂದ ಕೊಡಬೇಕು. ಇದಕ್ಕೆ ಬೇಕಾದ ಹಣವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ಜನರಿಂದ ತೆರಿಗೆವಸೂಲಿ ಮಾಡಿದ ಹಣದಿಂದ ಕೊಡಬೇಕು. ಈ ಕೆಲಸವನ್ನು ನೀವು ಬೇಗನೆ ಮಾಡಬೇಕು. ದೇವಾಲಯದ ಕೆಲಸ ನಿಂತುಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದೆ ಎಲ್ಲ ವೆಚ್ಚವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವುದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನೆಂದರೆ: ಅವರು ಅಭ್ಯಂತರ ಮಾಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ತೆರಿಗೆಯಿಂದಲೇ ಈ ಮನುಷ್ಯರಿಗೆ ವೆಚ್ಚವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:8
15 ತಿಳಿವುಗಳ ಹೋಲಿಕೆ  

ಅದರ ಗೋಡೆಯಲ್ಲಿ ಮೂರುಸಾಲು ದೊಡ್ಡ ಗಾತ್ರದ ಕಲ್ಲುಗಳಿರಬೇಕು; ಒಂದು ಸಾಲಿನಲ್ಲಿ ಮರದ ತೊಲೆಗಳಿರಬೇಕು. ದೇವಾಲಯ ಕಟ್ಟಲು ತಗಲುವ ಖರ್ಚುವೆಚ್ಚವೆಲ್ಲವನ್ನು ರಾಜನ ಖಜಾನೆಯಿಂದ ಕೊಡಬೇಕು.


‘ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾಕಟಾಕ್ಷವಿತ್ತು. ರಾಜನಾದ ದಾರ್ಯಾವೆಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು.


ರಾಜನಾದ ಅರ್ತಷಸ್ತನು ಬರೆದ ಪತ್ರವನ್ನು ರೆಹೂಮನಿಗೂ ಕಾರ್ಯದರ್ಶಿ ಶಿಂಷೈಗೂ ಅವರೊಂದಿಗಿದ್ದ ಜನರ ಮುಂದೆ ಓದಲಾಯಿತು. ಆ ಕೂಡಲೇ ಅವರು ಬೇಗನೆ ಜೆರುಸಲೇಮಿನಲ್ಲಿದ್ದ ಯೆಹೂದ್ಯರ ಬಳಿಗೆ ಹೋಗಿ ಅಲ್ಲಿ ನಡೆಯುತ್ತಿದ್ದ ಕೆಲಸವನ್ನು ಬಲವಂತದಿಂದ ನಿಲ್ಲಿಸಿದರು.


ರಾಜನಾದ ಅರ್ತಷಸ್ತನೇ, ಈ ಪಟ್ಟಣ ಮತ್ತು ಅದರ ಪೌಳಿಗೋಡೆಗಳು ತಿರಿಗಿ ಕಟ್ಟಲ್ಪಟ್ಟರೆ ನೀವು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಿರಿ.


ಕೆಲಸ ಮಾಡುವವರನ್ನು ತೊಂದರೆಪಡಿಸಬೇಡಿ. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡಬೇಡಿ. ಯೆಹೂದ್ಯರ ದೇಶಾಧಿಪತಿ ಮತ್ತು ಯೆಹೂದ್ಯ ನಾಯಕರು ಅದನ್ನು ಮತ್ತೆ ಕಟ್ಟಲಿ. ಹಿಂದಿನ ದೇವಾಲಯವಿದ್ದಲ್ಲಿಯೇ ಹೊಸದನ್ನು ಕಟ್ಟಲಿ.


ಆ ಜನರಿಗೆ ಏನು ಅವಶ್ಯಕತೆಯಿದೆಯೋ ಅದನ್ನು ಪೂರೈಸಬೇಕು. ಅವರಿಗೆ ಎಳೆಹೋರಿಗಳು, ಟಗರುಗಳು, ಗಂಡುಕುರಿಗಳು ಪರಲೋಕದ ದೇವರಿಗೆ ಯಜ್ಞವನ್ನರ್ಪಿಸಲು ಬೇಕಾಗಿದ್ದರೆ ಅವುಗಳನ್ನು ಕೊಡಿರಿ. ಜೆರುಸಲೇಮಿನ ಯಾಜಕರು ಗೋಧಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಬೇಕು ಎಂದು ಹೇಳಿದರೆ ಅದನ್ನು ಪ್ರತಿದಿನ ತಪ್ಪದೆ ಒದಗಿಸಿರಿ.


ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಆ ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ.


ಗಾಯಕರಾಗಿದ್ದ ಇವರು ದೇವಾಲಯದ ಸೇವಾಕಾರ್ಯಗಳಲ್ಲಿ ಹಾಡುತ್ತಿದ್ದರು. ಇವರ ಅನುದಿನದ ಕರ್ತವ್ಯವನ್ನು ರಾಜನೇ ತಿಳಿಸುತ್ತಿದ್ದನು. ಇವರು ಅದಕ್ಕೆ ವಿಧೇಯರಾಗುತ್ತಿದ್ದರು.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.


ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು