ಎಜ್ರ 7:1 - ಪರಿಶುದ್ದ ಬೈಬಲ್1 ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದ ಮೇಲೆ ಪರ್ಷಿಯ ರಾಜ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರಾಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದಾದ ಮೇಲೆ ಪಾರಸಿಯ ರಾಜನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬೆಲಿನಿಂದ ಬಂದನು. ಇವನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈ ಕಾರ್ಯಗಳಾದ ತರುವಾಯ ಪಾರಸಿಯ ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಹೊರಟುಹೋದನು. ಇವನು ಸೆರಾಯನ ಮಗನು; ಇವನು ಅಜರ್ಯನ ಮಗನು; ಇವನು ಹಿಲ್ಕೀಯನ ಮಗನು; ಅಧ್ಯಾಯವನ್ನು ನೋಡಿ |
ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.
ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.