ಎಜ್ರ 7:10 - ಪರಿಶುದ್ದ ಬೈಬಲ್10 ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿ |
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.