ಎಜ್ರ 7:14 - ಪರಿಶುದ್ದ ಬೈಬಲ್14 ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಆ ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀನು ಹೋಗಿ, ಜುದೇಯದವರ ಮತ್ತು ಜೆರುಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಗುಣವಾಗಿ ಇದೆಯೋ ಇಲ್ಲವೋ ವಿಮರ್ಶೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇವಿುನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ವಿಮರ್ಶೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ನಿಯಮ ಗ್ರಂಥಕ್ಕೆ ಅನುಗುಣವಾಗಿ ಇದೆಯೋ, ಇಲ್ಲವೋ ವಿಮರ್ಶೆ ಮಾಡಬೇಕು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.
ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.