Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:21 - ಪರಿಶುದ್ದ ಬೈಬಲ್‌

21 ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 :ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅರ್ತಷಸ್ತರಾಜನಾದ ನಾನು ಹೊಳೆಯಾಚೆಯ ಪ್ರಾಂತಗಳ ಭಂಡಾರಮುಖ್ಯಸ್ಥರಿಗೆ ಆಜ್ಞಾಪಿಸುವದು - ಯಾಜಕನೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಅರ್ತಷಸ್ತ ರಾಜನಾದ ನಾನು, ಯೂಫ್ರೇಟೀಸ್ ನದಿ ಆಚೆಯ ಪ್ರಾಂತಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ ಯಾಜಕನೂ, ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:21
11 ತಿಳಿವುಗಳ ಹೋಲಿಕೆ  

ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ರಾಜನಾದ ಅರ್ತಷಸ್ತನೇ, ಈ ಪಟ್ಟಣ ಮತ್ತು ಅದರ ಪೌಳಿಗೋಡೆಗಳು ತಿರಿಗಿ ಕಟ್ಟಲ್ಪಟ್ಟರೆ ನೀವು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಿರಿ.


ಹೀಗಿರುವದರಿಂದ, ದಾರ್ಯಾವೇಷನಾದ ನಾನು, ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಕ್ಕೆ ರಾಜ್ಯಪಾಲನಾಗಿರುವ ತತ್ತೆನೈ ಎಂಬ ನಿನಗೂ ಶೆತರ್ಬೋಜೆನೈ ಮತ್ತು ಆ ಪ್ರಾಂತ್ಯದ ಎಲ್ಲಾ ಅಧಿಕಾರಿಗಳಿಗೂ ಆಜ್ಞೆ ಕೊಡುವದೇನೆಂದರೆ, ಜೆರುಸಲೇಮಿನಿಂದ ನೀವು ದೂರವಾಗಿರಿ.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.


ಇವುಗಳನ್ನು ನೀವು ಎಜ್ರನಿಗೆ ಕೊಡಬೇಕು: ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿ, ಇಪ್ಪತ್ತೆರಡು ಸಾವಿರ ಕಿಲೋಗ್ರಾಂ ಗೋಧಿ, ಎರಡು ಸಾವಿರದ ಇನ್ನೂರು ಲೀಟರ್ ದ್ರಾಕ್ಷಾರಸ, ಎರಡು ಸಾವಿರದ ಇನ್ನೂರು ಲೀಟರ್ ಆಲಿವ್ ಎಣ್ಣೆ ಮತ್ತು ಬೇಕಾಗುವಷ್ಟು ಉಪ್ಪು.


ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.


ಆಮೇಲೆ “ರಾಜನೇ, ನನಗೆ ಸಹಾಯವನ್ನು ಮಾಡಲು ನೀನು ಇಚ್ಫಿಸುವುದಾದರೆ ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲರಿಗೆ ಪತ್ರಗಳನ್ನು ಬರೆದುಕೊಟ್ಟರೆ ನಾನು ಯೆಹೂದಕ್ಕೆ ಅವರ ಪ್ರಾಂತ್ಯಗಳ ಮೂಲಕವಾಗಿ ಸುರಕ್ಷಿತವಾಗಿ ಹೋಗಲು ಸಾಧ್ಯವಾಗುವುದು.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು