Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:22 - ಪರಿಶುದ್ದ ಬೈಬಲ್‌

22 ಇವುಗಳನ್ನು ನೀವು ಎಜ್ರನಿಗೆ ಕೊಡಬೇಕು: ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿ, ಇಪ್ಪತ್ತೆರಡು ಸಾವಿರ ಕಿಲೋಗ್ರಾಂ ಗೋಧಿ, ಎರಡು ಸಾವಿರದ ಇನ್ನೂರು ಲೀಟರ್ ದ್ರಾಕ್ಷಾರಸ, ಎರಡು ಸಾವಿರದ ಇನ್ನೂರು ಲೀಟರ್ ಆಲಿವ್ ಎಣ್ಣೆ ಮತ್ತು ಬೇಕಾಗುವಷ್ಟು ಉಪ್ಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೂರು ತಲಾಂತು ಬೆಳ್ಳಿ, ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ, ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬೆಳ್ಳಿಯನ್ನು 3400 ಕಿಲೋಗ್ರಾಂ, ಗೋದಿಯನ್ನು 10,000 ಕಿಲೋಗ್ರಾಂ, ದ್ರಾಕ್ಷಾರಸವನ್ನು 200 ಲೀಟರ್, ಎಣ್ಣೆಯನ್ನು 2000 ಲೀಟರ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬೆಳ್ಳಿಯನ್ನು ನೂರು ತಲಾಂತು, ಗೋದಿಯನ್ನು ನೂರು ಕೋರ್, ದ್ರಾಕ್ಷಾರಸವನ್ನು ನೂರು ಬತ್, ಎಣ್ಣೆಯನ್ನು ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 3.4 ಮೆಟ್ರಿಕ್ ಟನ್ ಬೆಳ್ಳಿಯನ್ನು, 16 ಮೆಟ್ರಿಕ್ ಟನ್ ಗೋಧಿಯನ್ನು, 2,200 ಲೀಟರ್ ದ್ರಾಕ್ಷಾರಸವನ್ನು, 2,200 ಲೀಟರ್ ಎಣ್ಣೆಯನ್ನು, ಇಷ್ಟರ ಮಟ್ಟಿಗೂ ಕೊಡಬೇಕು. ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:22
5 ತಿಳಿವುಗಳ ಹೋಲಿಕೆ  

ಒಂದು ಕೋರ್ ಆಲೀವ್ ಎಣ್ಣೆಗೆ 1/10 ಬತ್ ಆಲಿವ್ ಎಣ್ಣೆಯನ್ನು ಕೊಡಬೇಕು; ಹತ್ತು ಬತ್ ಅಂದರೆ ಒಂದು ಹೋಮೆರ್, ಹತ್ತು ಬತ್ ಅಂದರೆ ಒಂದು ಕೋರ್ ಎಂಬುದನ್ನು ಜ್ಞಾಪಕದಲ್ಲಿಡಿರಿ.


ನೀವು ಅರ್ಪಿಸುವ ಪ್ರತಿ ಧಾನ್ಯಸಮರ್ಪಣೆಯಲ್ಲೂ ಉಪ್ಪನ್ನು ಹಾಕಬೇಕು. ನಿಮ್ಮ ಧಾನ್ಯಸಮರ್ಪಣೆಯಲ್ಲಿ ದೇವರ ಒಡಂಬಡಿಕೆಯೆಂಬ ಉಪ್ಪು ಇರಲೇಬೇಕು. ನೀವು ಅರ್ಪಿಸುವ ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉಪ್ಪನ್ನು ಸೇರಿಸಬೇಕು.”


ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.


ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು