ಎಜ್ರ 7:26 - ಪರಿಶುದ್ದ ಬೈಬಲ್26 ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿನ್ನ ದೇವರಾಜ್ಞೆಯನ್ನೂ, ರಾಜಾಜ್ಞೆಯನ್ನೂ ಕೈಗೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿ ಹಾಕುವುದು, ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.” ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.