Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:28 - ಪರಿಶುದ್ದ ಬೈಬಲ್‌

28 ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲ ವಿಶಿಷ್ಟ ಪದಾಧಿಕಾರಿಗಳ ಮುಂದೆ ನನಗೆ ದೇವರು ದಯೆತೋರಿಸಿದ್ದಾರೆ. ನನ್ನ ದೇವರಾದ ಸರ್ವೇಶ್ವರನ ಕೃಪಾಹಸ್ತ ನನ್ನ ಮೇಲಿದ್ದುದರಿಂದಲೇ ನಾನು ಧೈರ್ಯ ತಂದುಕೊಂಡು, ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವುಮಂದಿ ಇಸ್ರಯೇಲ್ ಮುಖಂಡರನ್ನು ಒಂದುಗೂಡಿಸಿಕೊಂಡೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನಗೆ ದೊರಕಿದ್ದರಿಂದ ನಾನು ಧೈರ್ಯತಂದುಕೊಂಡು ನನ್ನೊಂದಿಗೆ ಪ್ರಯಾಣ ಮಾಡುವದಕ್ಕೆ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನ ಮುಂದೆಯೂ, ಅವನ ಸಲಹೆಗಾರರ ಮುಂದೆಯೂ, ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆತೋರಿಸಿದ್ದಾರೆ. ಹೀಗೆಯೇ ನನ್ನ ದೇವರಾಗಿರುವ ಯೆಹೋವ ದೇವರ ಹಸ್ತವು ನನ್ನ ಮೇಲೆ ಇದ್ದುದರಿಂದ, ನಾನು ಧೈರ್ಯಗೊಂಡು ಇಸ್ರಾಯೇಲಿನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:28
15 ತಿಳಿವುಗಳ ಹೋಲಿಕೆ  

ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.


ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.


ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು.


ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾಕಟಾಕ್ಷವಿತ್ತು. ರಾಜನಾದ ದಾರ್ಯಾವೆಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು. ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: ಸ್ವಲ್ಪ ಸಮಯದವರೆಗೆ ಯಾವ ವ್ಯಕ್ತಯಾಗಲಿ ಪ್ರಾಣಿಯಾಗಲಿ ಆಹಾರವನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾರೂ ಊಟಮಾಡಬಾರದು, ನೀರು ಕುಡಿಯಬಾರದು.


ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”


ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಆ ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ.


ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.


ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿದೆ. ಅರಸನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ನಾವು ಜೆರುಸಲೇಮಿಗೆ ಬಂದು ಸೇರಿದೆವು. ಬಂದವರ ಹೆಸರುಗಳು ಹೀಗಿವೆ:


ಅವನಿಗೆ ಯಾರೂ ಕೃಪೆತೋರದಿರಲಿ; ಅವನ ಮಕ್ಕಳಿಗೂ ಯಾರೂ ಕರುಣೆತೋರದಿರಲಿ.


ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು