ಎಜ್ರ 7:5 - ಪರಿಶುದ್ದ ಬೈಬಲ್5 ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲ್ಲಾಜಾರನ ಮಗನು; ಇವನು ಪ್ರಧಾನ ಯಾಜಕನಾದ ಆರೋನನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು. ಅಧ್ಯಾಯವನ್ನು ನೋಡಿ |
ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.
ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.
ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.