ಎಜ್ರ 7:8 - ಪರಿಶುದ್ದ ಬೈಬಲ್8 ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಎಜ್ರನು ಜೆರುಸಲೇಮನ್ನು ತಲುಪಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ತಲುಪಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಜೆರುಸಲೇಮನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಎಜ್ರನು ಆ ಅರಸನ ಆಳಿಕೆಯ ಏಳನೆಯ ವರುಷದಲ್ಲಿ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅರಸನ ಏಳನೆಯ ವರ್ಷದ, ಐದನೆಯ ತಿಂಗಳಲ್ಲಿ ಎಜ್ರನು ಯೆರೂಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿ |
ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.