ಎಜ್ರ 8:1 - ಪರಿಶುದ್ದ ಬೈಬಲ್1 ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿದೆ. ಅರಸನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ನಾವು ಜೆರುಸಲೇಮಿಗೆ ಬಂದು ಸೇರಿದೆವು. ಬಂದವರ ಹೆಸರುಗಳು ಹೀಗಿವೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರ್ತಷಸ್ತನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರ ಹೀಗಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರ್ತಷಸ್ತನ ಆಳಿಕೆಯಲ್ಲಿ ನನ್ನೊಂದಿಗೆ ಬಾಬೆಲಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ: ಅಧ್ಯಾಯವನ್ನು ನೋಡಿ |
ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.