ಎಜ್ರ 8:21 - ಪರಿಶುದ್ದ ಬೈಬಲ್21 ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ - ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೇಳಿಕೊಳ್ಳಬೇಕೆಂದು ಪ್ರಕಟಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು. ಅಧ್ಯಾಯವನ್ನು ನೋಡಿ |
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು. ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: ಸ್ವಲ್ಪ ಸಮಯದವರೆಗೆ ಯಾವ ವ್ಯಕ್ತಯಾಗಲಿ ಪ್ರಾಣಿಯಾಗಲಿ ಆಹಾರವನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾರೂ ಊಟಮಾಡಬಾರದು, ನೀರು ಕುಡಿಯಬಾರದು.