ಎಜ್ರ 8:25 - ಪರಿಶುದ್ದ ಬೈಬಲ್25 ದೇವಾಲಯಕ್ಕೆ ಕೊಟ್ಟಿರುವ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಸ್ತುಗಳನ್ನು ನಾನು ತೂಗಿ ಆರಿಸಲ್ಪಟ್ಟಿದ್ದ ಹನ್ನೆರಡು ಮಂದಿಗೆ ಕೊಟ್ಟೆನು. ಅವುಗಳನ್ನು ಅರ್ತಷಸ್ತ ರಾಜನೂ ಅವನ ಸಲಹೆಗಾರರೂ ಉನ್ನತಾಧಿಕಾರಿಗಳೂ ಅಲ್ಲದೆ ಬಾಬಿಲೋನಿನಲ್ಲಿದ್ದ ಎಲ್ಲಾ ಇಸ್ರೇಲರು ದೇವಾಲಯಕ್ಕಾಗಿ ಕೊಟ್ಟಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅರಸನಿಂದಲು, ಅವನ ಮಂತ್ರಿಗಳಿಂದಲು, ಪದಾಧಿಕಾರಿಗಳಿಂದಲು, ಅಲ್ಲಿದ್ದ ಎಲ್ಲ ಇಸ್ರಯೇಲರಿಂದಲು ನಮ್ಮ ದೇವರ ಆಲಯಕ್ಕೆ ಕಾಣಿಕೆಯಾಗಿ ಕೊಡಲಾಗಿದ್ದ ಬೆಳ್ಳಿಬಂಗಾರವನ್ನು ಹಾಗು ಸಾಮಾಗ್ರಿಗಳನ್ನು ತೂಕಮಾಡಿ ಅವರಿಗೆ ಒಪ್ಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅರಸನಿಂದಲೂ ಅವನ ಮಂತ್ರಿಗಳಿಂದಲೂ ಸರದಾರರಿಂದಲೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿಬಂಗಾರವನ್ನೂ ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು. ಅಧ್ಯಾಯವನ್ನು ನೋಡಿ |