ಎಜ್ರ 8:30 - ಪರಿಶುದ್ದ ಬೈಬಲ್30 ಎಜ್ರನು ತೂಕಮಾಡಿ ಕೊಟ್ಟ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಿಶೇಷ ವಸ್ತುಗಳನ್ನು ಯಾಜಕರು ಮತ್ತು ಲೇವಿಯರು ಸ್ವೀಕರಿಸಿ ಜೆರುಸಲೇಮಿನಲ್ಲಿರುವ ದೇವಾಲಯಕ್ಕೆ ತಲುಪಿಸುವ ಜವಾಬ್ದಾರಿಕೆ ಹೊತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ, ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆ ಯಾಜಕರು ಹಾಗು ಲೇವಿಯರು ಜೆರುಸಲೇಮಿನ ದೇವಾಲಯಕ್ಕೆ ತಲುಪಿಸುವ ಉದ್ದೇಶದಿಂದ ಆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿ ಇಟ್ಟುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ಯಾಜಕರೂ ಲೇವಿಯರೂ ಯೆರೂಸಲೇವಿುನ ದೇವಾಲಯಕ್ಕೆ ಮುಟ್ಟಿಸುವದಕ್ಕೋಸ್ಕರ ಬೆಳ್ಳಿ ಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹಾಗೆಯೇ ಯಾಜಕರೂ, ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ, ಬಂಗಾರವನ್ನೂ, ವಸ್ತುಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿ |