ಎಜ್ರ 8:33 - ಪರಿಶುದ್ದ ಬೈಬಲ್33 ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಬಾದನು ಮತ್ತು ಬಿನ್ನೂಯನ ಮಗನಾದ ನೋವದ್ಯನು ಅವರ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿ ಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗ ಯೋಜಾಬಾದ್, ಬಿನ್ನೂಯನ ಮಗ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು. ಅಧ್ಯಾಯವನ್ನು ನೋಡಿ |