ಎಜ್ರ 8:36 - ಪರಿಶುದ್ದ ಬೈಬಲ್36 ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ನದಿಯಾಚೆಯ ರಾಜ್ಯಪಾಲರಿಗೂ ಒಪ್ಪಿಸಿದರು. ಅಂದಿನಿಂದ ಆ ಅಧಿಕಾರಿಗಳು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು. ಅಧ್ಯಾಯವನ್ನು ನೋಡಿ |
ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.