Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:1 - ಪರಿಶುದ್ದ ಬೈಬಲ್‌

1 ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು - ಇಸ್ರಾಯೇಲ್ಯರಲ್ಲಿ ಸಾಧಾರಣಜನರೂ ಯಾಜಕರೂ ಲೇವಿಯರೂ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಎಂಬ ಅನ್ಯದೇಶಗಳವರ ಬಳಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:1
37 ತಿಳಿವುಗಳ ಹೋಲಿಕೆ  

ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು.


ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.


ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.


ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.


ಅವನ ಜೊತೆಯಲ್ಲಿದ್ದ ಅಮ್ಮೋನಿಯನಾದ ಟೋಬೀಯನು, “ಈ ಯೆಹೂದ್ಯರು ಕಟ್ಟುತ್ತಿರುವುದೇನು? ಆ ಗೋಡೆಯ ಮೇಲೆ ಒಂದು ನರಿ ಹಾರಿದರೂ ಗೋಡೆಯು ಕುಸಿದುಬೀಳುವುದು” ಎಂದು ವ್ಯಂಗ್ಯವಾಗಿ ಹೇಳಿದನು.


ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.


ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.


ರಾಜನಾದ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಯ, ಅಮ್ಮೋನಿಯ, ಎದೋಮ್ಯ ಚೀದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು.


“ನೀವು ನಿಮ್ಮ ವಾಗ್ದತ್ತ ದೇಶಕ್ಕೆ ಬಂದಾಗ ಸುತ್ತಮುತ್ತಲಿನ ಜನರು ನಡೆಯುವ ರೀತಿಯಲ್ಲಿ ನೀವು ನಡೆಯಬಾರದು. ಅವರ ಅಸಹ್ಯವಾದ ಪದ್ದತಿಗಳನ್ನು ಅನುಸರಿಸಬಾರದು.


ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು; ಗುಡ್ಡದಿಂದ ಅವರನ್ನು ಕಂಡೆನು. ಅವರು ತಮ್ಮನ್ನು ಇತರ ಜನಾಂಗಗಳಿಗಿಂತ ಬೇರೆಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ.


ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ.


“ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.


ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.


ಆ ದಿನಗಳಲ್ಲಿ ಕೆಲವು ಮಂದಿ ಯೆಹೂದ್ಯರು ಅಷ್ಡೋದ್, ಅಮ್ಮೋನ್, ಮೋವಾಬ್ ಊರುಗಳಿಂದ ಹೆಣ್ಣನ್ನು ತಂದು ಮದುವೆ ಮಾಡಿಕೊಂಡದ್ದು ನನ್ನ ನೆನಪಿಗೆ ಬಂತು.


ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕೃತ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ.


ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಅಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು.


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ಎದೋಮ್ಯರ ಮತ್ತು ಈಜಿಪ್ಟಿನವರ ಮೂರನೆ ತಲೆಮಾರಿನವರು ಇಸ್ರೇಲರೊಂದಿಗೆ ದೇವಾರಾಧನೆ ಮಾಡಬಹುದು.


“ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ,


ಇಸ್ರೇಲರು ಇದ್ದ ದೇಶದಲ್ಲಿ ಅನ್ಯ ಜನರಾದ ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುತ್ತಿದ್ದರು. ಇವರನ್ನೆಲ್ಲಾ ಸೊಲೊಮೋನನು ಗುಲಾಮರನ್ನಾಗಿ ಉಪಯೋಗಿಸಿದನು. ಈ ಜನರು ಇಸ್ರೇಲರಾಗಿರಲಿಲ್ಲ. ಇಸ್ರೇಲರು ದೇಶವನ್ನು ವಶಪಡಿಸಿಕೊಂಡಾಗ ಅಲ್ಲಿದ್ದ ನಿವಾಸಿಗಳನ್ನು ಓಡಿಸದೆ ಬಿಟ್ಟವರ ಸಂತತಿಯವರಾಗಿದ್ದರು. ಅವರು ಈಗಲೂ ಅಲ್ಲಿಯೇ ಇದ್ದಾರೆ.


ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗೆಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು