Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:11 - ಪರಿಶುದ್ದ ಬೈಬಲ್‌

11 ದೇವರೇ, ನೀನು ನಿನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಆ ಆಜ್ಞೆಗಳನ್ನು ಕೊಟ್ಟಿರುವೆ. ನೀನು ಹೀಗೆ ಹೇಳಿದೆ: ‘ನೀವು ವಾಸಿಸಲಿರುವ ಮತ್ತು ನಿಮ್ಮದನ್ನಾಗಿಸಿಕೊಳ್ಳುವ ನಾಡು ಪಾಳಾಗಿರುವ ನಾಡಾಗಿದೆ. ಅಲ್ಲಿಯ ಜನರು ಎಲ್ಲೆಲ್ಲಿಯೂ ಮಾಡಿರುವ ಕೆಟ್ಟಕೃತ್ಯಗಳಿಂದ ಅದು ಹಾಳಾಗಿದೆ; ಅವರು ತಮ್ಮ ಪಾಪಗಳಿಂದ ಆ ನಾಡನ್ನು ಹೊಲಸು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ನಾಡು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ - ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಯಿತು. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನೀವು ಆ ನಿಮ್ಮ ಆಜ್ಞೆಗಳನ್ನು ಕೊಟ್ಟಿದ್ದೀರಿ. ‘ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು, ಆ ದೇಶಗಳ ಜನರ ಅಶುದ್ಧತ್ವದಿಂದ ಮೈಲಿಗೆಯಾದ ದೇಶವಾಗಿದೆ. ಆ ಜನರು ತಮ್ಮ ಅಸಹ್ಯ ಅಭ್ಯಾಸಗಳಿಂದ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯವರೆಗೂ ತುಂಬಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:11
11 ತಿಳಿವುಗಳ ಹೋಲಿಕೆ  

ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.


ಇಂಥ ಕಾರ್ಯಗಳನ್ನು ಮಾಡುವ ಜನರನ್ನು ದೇವರು ದ್ವೇಷಿಸುತ್ತಾನೆ. ಆದ್ದರಿಂದಲೇ ಆ ಜನಾಂಗಗಳವರನ್ನು ನಿಮಗೋಸ್ಕರವಾಗಿ ಈ ದೇಶದಿಂದ ಹೊರಡಿಸುವನು.


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


“ದೇವರೇ, ಈಗ ನಾವು ನಿನಗೆ ಏನು ಹೇಳೋಣ? ನಾವು ನಿನಗೆ ವಿಧೇಯರಾಗುವುದನ್ನು ನಿಲ್ಲಿಸಿದ್ದೇವೆ.


ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು