ಎಜ್ರ 9:13 - ಪರಿಶುದ್ದ ಬೈಬಲ್13 “ನಮಗೆ ಒದಗಿದ ಕೆಡುಕು, ಸಂಕಟಗಳಿಗೆ ನಾವೇ ಕಾರಣರು. ನಾವು ಅನೀತಿ ಕೆಲಸಗಳನ್ನು ಮಾಡಿದ್ದೆವು. ಅದಕ್ಕೆ ಅನುಭವಿಸಬೇಕಾಗಿದ್ದ ಶಿಕ್ಷೆಯನ್ನು ನೀನು ನಮಗೆ ವಿಧಿಸಲಿಲ್ಲ. ನಾವು ಅತಿಘೋರವಾದ ಪಾಪಗಳನ್ನು ಮಾಡಿದ್ದಕ್ಕೆ ಅತ್ಯಂತ ಘೋರ ಶಿಕ್ಷೆಯು ನಮಗೆ ದೊರಕ ಬೇಕಿತ್ತು. ಆದರೂ ನೀನು ನಮ್ಮವರಲ್ಲಿ ಕೆಲವರನ್ನು ಸೆರೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಮ್ಮ ದುಷ್ಕರ್ಮಮಹಾಪರಾಧಗಳ ನಿವಿುತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ ನಮ್ಮಲ್ಲಿ ಇಷ್ಟು ಮಂದಿಯನ್ನು ಉಳಿಸಿದಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನಮ್ಮ ದುಷ್ಕಾರ್ಯ ಹಾಗೂ ನಮ್ಮ ಮಹಾ ಅಪರಾಧಕ್ಕಾಗಿ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ, ನಮ್ಮ ದೇವರಾಗಿರುವ ನೀವು ನಮ್ಮ ಪಾಪಗಳಿಗಿಂತ ಕಡಿಮೆ ಶಿಕ್ಷೆ ನೀಡಿದ್ದೀರಿ ಮತ್ತು ನಮ್ಮಲ್ಲಿ ಈ ರೀತಿಯಾಗಿ ಇಷ್ಟುಮಂದಿಯನ್ನು ಉಳಿಸಿದ್ದೀರಿ. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.