ಎಜ್ರ 9:14 - ಪರಿಶುದ್ದ ಬೈಬಲ್14 ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗಿರುವಲ್ಲಿ, ನಾವು ಪುನಃ ನಿಮ್ಮ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ವಿವಾಹ ಸಂಬಂಧ ಬೆಳೆಸುವುದು ಯೋಗ್ಯವೇ? ಹಾಗೆ ಮಾಡಿದರೆ, ನೀವು ನಮ್ಮ ಮೇಲೆ ರೌದ್ರಾವೇಶವುಳ್ಳವರಾಗಿ, ಯಾರೂ ತಪ್ಪಿಸಿಕೊಳ್ಳದಂತೆ ನಮ್ಮನ್ನು ಮುಗಿಸಿಬಿಡುವಿರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ? ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”