ಎಜ್ರ 9:3 - ಪರಿಶುದ್ದ ಬೈಬಲ್3 ಇದನ್ನು ಕೇಳಿದೊಡನೆ ನನ್ನ ಮನಸ್ಸಿನ ದುಃಖವನ್ನು ತೋರಿಸುವಂತೆ ನನ್ನ ಬಟ್ಟೆಯನ್ನು ಹರಿದು ಹಾಕಿದೆನು. ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕೆದರಿಕೊಂಡು ದಿಗ್ಭ್ರಮೆಗೊಂಡವನಾಗಿಯೂ ಬೇಸರಗೊಂಡವನಾಗಿಯೂ ಕುಳಿತುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು ಸ್ತಬ್ಧನಾಗಿ ಕೂತುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಇದನ್ನು ಕೇಳಿದಾಗ ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು, ಸ್ತಬ್ಧನಾಗಿ ಕುಳಿತುಕೊಂಡೆನು. ಅಧ್ಯಾಯವನ್ನು ನೋಡಿ |
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.