ಎಜ್ರ 9:8 - ಪರಿಶುದ್ದ ಬೈಬಲ್8 “ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವವನ್ನು ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”
ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.