ಎಜ್ರ 9:9 - ಪರಿಶುದ್ದ ಬೈಬಲ್9 ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.
ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.