Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:1 - ಪರಿಶುದ್ದ ಬೈಬಲ್‌

1 ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನು ಬರೆಯುವ ಪತ್ರ. ನಾನು ದೇವರ ಇಷ್ಟಾನುಸಾರವಾಗಿ ಅಪೊಸ್ತಲನಾಗಿದ್ದೇನೆ. ಎಫೆಸ ಪಟ್ಟಣದಲ್ಲಿ ವಾಸವಾಗಿರುವ ಮತ್ತು ಕ್ರಿಸ್ತಯೇಸುವಿನಲ್ಲಿ ನಂಬಿಕೆಯಿಟ್ಟಿರುವ ಪರಿಶುದ್ಧ ದೇವಜನರಿಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ಮನಾ ಸಾರ್ಕೆ ಕ್ರಿಸ್ತ್ ಜೆಜುಚೊ ಎಕ್ ಅಪೊಸ್ತಲ್ ಪಾವ್ಲು, ಎಫೆಜಾತ್ಲ್ಯಾ ಕ್ರಿಸ್ತಾ ಜೆಜುಚ್ಯಾ ಎಕ್ವಟಾಚ್ಯಾ ಜಿವನಾತ್ ವಿಶ್ವಾಸಾನ್ ಹೊತ್ತ್ಯಾ ದೆವಾಚ್ಯಾ ಲೊಕಾಕ್ನಿ ಲಿವ್ತಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:1
27 ತಿಳಿವುಗಳ ಹೋಲಿಕೆ  

ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿ ನಂಬಿಗಸ್ತರಾದ ಮತ್ತು ಪವಿತ್ರರಾದ ಸಹೋದರ, ಸಹೋದರಿಯರಿಗೆ ನಾನು ಈ ಪತ್ರವನ್ನು ನಮ್ಮ ಸಹೋದರನಾದ ತಿಮೊಥೆಯನ ಜೊತೆಗೂಡಿ ಬರೆಯುತ್ತಿದ್ದೇನೆ. ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರಕಲಿ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.


ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ.


ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.


ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.


ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿರುವವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿರುವನು. ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ಆದರೆ ಮೋಶೆಯೊಡನೆ ನಾನು ಆ ರೀತಿ ಮಾಡುವುದಿಲ್ಲ. ಮೋಶೆಯು ನನ್ನ ನಂಬಿಗಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ.


ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.


ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.


ಬಳಿಕ ಅವರು ಎಫೆಸ ಪಟ್ಟಣಕ್ಕೆ ಹೋದರು. ಪ್ರಿಸ್ಕಿಲ್ಲ ಮತ್ತು ಅಕ್ವಿಲರನ್ನು ಪೌಲನು ಬಿಟ್ಟಿಹೋದದ್ದು ಇಲ್ಲಿಯೇ. ಪೌಲನು ಎಫೆಸದಲ್ಲಿದ್ದಾಗ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚಿಸಿದನು.


ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.


ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಆದಕಾರಣವೇ ನನ್ನ ಪ್ರಾರ್ಥನೆಗಳಲ್ಲಿ ನಾನು ನಿಮ್ಮನ್ನು ಜ್ಞಾಪಿಸಿಕೊಂಡು ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಸ್ತೋತ್ರ ಸಲ್ಲಿಸುತ್ತೇನೆ. ಪ್ರಭುವಾದ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ ಮತ್ತು ಎಲ್ಲಾ ದೇವಜನರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದಂದಿನಿಂದ ನಾನು ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.


ದೇವರು ನಮ್ಮನ್ನು ಕ್ರಿಸ್ತನೊಂದಿಗೆ ಎಬ್ಬಿಸಿ ಆತನೊಂದಿಗೆ ಪರಲೋಕದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸಿದ್ದಾನೆ. ಕ್ರಿಸ್ತ ಯೇಸುವಿನಲ್ಲಿರುವ ನಮಗಾಗಿ ದೇವರು ಇದನ್ನು ಮಾಡಿದನು.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು