ಎಫೆಸದವರಿಗೆ 1:13 - ಪರಿಶುದ್ದ ಬೈಬಲ್13 ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಹೆ ತುಮ್ಕಾಬಿ ಲಾಗುಹೊತಾ ತುಮಿ ಖರ್‍ಯಾ ಶಿಕಾಪಾಚ್ಯಾ ವಿಶಯಾತ್ ಮಟ್ಲ್ಯಾರ್ ತುಮ್ಚ್ಯಾ ರಾಕ್ವನಿಚ್ಯಾ ವಿಶಯಾಚಿ ಬರಿ ಖಬರ್ ಆಯ್ಕುನ್ ಕ್ರಿಸ್ತಾಚ್ಯಾ ವರ್ತಿ ವಿಶ್ವಾಸ್ ಥವ್ಲ್ಯಾಸಿ, ದೆವಾನ್ ಅಪ್ನಿ ದಿಲ್ಲ್ಯಾ ಗೊಸ್ಟಿ ಸಾರ್ಕೆ ಪವಿತ್ರ್ ಆತ್ಮೊ ದಿವ್ನ್ ತುಮ್ಚ್ಯಾ ವರ್ತಿ ವಿಶೆಸ್ ಛಪ್ಪೊ ಘಾಟಲೆ ಹಾಯ್. ಅಧ್ಯಾಯವನ್ನು ನೋಡಿ |
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,