ಎಫೆಸದವರಿಗೆ 1:19 - ಪರಿಶುದ್ದ ಬೈಬಲ್19 ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತನಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ವಿಶ್ವಾಸ್ ಕರ್ತಲ್ಯಾ ಅಮ್ಚ್ಯಾ ಮದ್ದಿ ಕಾಮ್ ಕರ್ತಲೊ ತೆಚೊ ಬಳ್ ಕೆವ್ಡೊ ಮೊಟೊ ಹಾಯ್ ಹ್ಯೊ ಬಳ್ ಅಮ್ಚ್ಯಾ ಮದ್ದಿ ತ್ಯಾಚ್ ಲೈ ಮೊಟ್ಯಾ ಬಳಾಚ್ಯಾ ವೈನಾ ದಿಲಾ. ಅಧ್ಯಾಯವನ್ನು ನೋಡಿ |
ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.