ಎಫೆಸದವರಿಗೆ 1:20 - ಪರಿಶುದ್ದ ಬೈಬಲ್20 ದೇವರು ಕ್ರಿಸ್ತನನ್ನು ಪರಲೋಕದೊಳಗೆ ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20-21 ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತೊಚ್ ಮೊಟೊ ಬಳ್ ತೆನಿ ವಾಪ್ರುನ್ ಕ್ರಿಸ್ತಾಕ್ ಮರಲ್ಲ್ಯಾಕ್ನಾ ಝಿತ್ತೊ ಕರ್ಲ್ಯಾನ್ ಅನಿ ಸರ್ಗಾಚ್ಯಾ ರಾಜಾತ್ ಅಪ್ನಾಚ್ಯಾ ಉಜ್ವ್ಯಾ ಭಾಜುಕ್ ತೆಕಾ ಬಸ್ವುಲ್ಯಾನ್. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!