ಎಫೆಸದವರಿಗೆ 1:21 - ಪರಿಶುದ್ದ ಬೈಬಲ್21 ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಕ್ರಿಸ್ತ್ ಸರ್ಗಾತ್ಲ್ಯಾ ಸಗ್ಳ್ಯಾ ಮೊಟೆಪಾನಾಂಚ್ಯಾ, ಅಧಿಕಾರಿಯಾಂಚ್ಯಾ, ಪದ್ವಿಚ್ಯಾ ಅನಿ ಧನಿಯಾಂಚ್ಯಾ ವೈರ್ ಅಧಿಕಾರ್ ಚಾಲ್ವುತಾ; ಹ್ಯಾ ಜಗಾತ್ಲ್ಯಾ ಅನಿ ಫಿಡೆ ಯೆತಲ್ಯಾ ಸಗ್ಳ್ಯಾ ಅಧಿಕಾರಾಂಚ್ಯಾ ವೈರ್ ಮೊಟೆ ನಾವ್ ತೆಕಾ ದಿಲ್ಲೆ ಹಾಯ್. ಅಧ್ಯಾಯವನ್ನು ನೋಡಿ |