ಎಫೆಸದವರಿಗೆ 1:6 - ಪರಿಶುದ್ದ ಬೈಬಲ್6 ದೇವರ ಅದ್ಭುತವಾದ ಕೃಪೆಯಿಂದಾದ ಈ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಆ ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಯೆವಾ ಅಮಿ ಮಹಿಮೆನ್ ಭರಲ್ಲ್ಯಾ ಕುರ್ಪೆ ಸಾಟ್ನಿ ದೆವಾಕ್ ಸ್ತುತಿ ಕರುಂವಾ, ಕಶ್ಯಾಕ್ ಮಟ್ಲ್ಯಾರ್, ತೆನಿ ಅಪ್ನಾಚ್ಯಾ ಅಪುರ್‍ಬಾಯೆಚ್ಯಾ ಲೆಕಾಚ್ಯಾ ವೈನಾ ಅಮ್ಕಾ ಫುಕೊಟ್ ದೆನೆ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”