ಎಫೆಸದವರಿಗೆ 2:13 - ಪರಿಶುದ್ದ ಬೈಬಲ್13 ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ ಮೂಲಕ ಹತ್ತಿರವಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ಅತ್ತಾ ದೆವಾಕ್ನಾ ಧುರ್ ಹೊತ್ತ್ಯಾಕ್ನಿ ತುಮ್ಕಾ ಕ್ರಿಸ್ತಾಚ್ಯಾ ಬಲಿ ಹೊತಲ್ಯಾ ವೈನಾ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾನ್ ದೆವಾಚ್ಯಾ ಜಗೊಳ್ ಹಾನುನ್ ಹೊಲಾ. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.