Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:14 - ಪರಿಶುದ್ದ ಬೈಬಲ್‌

14 ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಆ ಗೋಡೆಯನ್ನು ಕೆಡವಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾನ್ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಅಸಲ್ಲ್ಯಾಕ್ನಿ ಎಕ್ ಕರುನ್ ಅಪ್ನಿಚ್ ಅಮ್ಚ್ಯಾ ಮದ್ದಿ ಸಮಾಧಾನ್ ಹಾನ್ಲ್ಯಾನ್ ಅಪ್ನಾಚ್ಯಾ ಸ್ವಂತ ಆಂಗಾನ್ ತೆಂಚ್ಯಾ ದೊಗಾಂಚ್ಯಾ ಮದ್ದಿ ಎಗ್ಳೆ ಕರುಕ್ ಮನುನ್ ಹೊತ್ತಿ ದುಶ್ಮನ್ಕಿಚಿ ಭಿತ್ತ್ ತೆನಿ ಫೊಡುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:14
28 ತಿಳಿವುಗಳ ಹೋಲಿಕೆ  

ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ.


ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.


ನೀವು ಕ್ರಿಸ್ತನೊಂದಿಗೆ ಸತ್ತು ಪ್ರಾಪಂಚಿಕವಾದ ನಿರರ್ಥಕ ನಿಯಮಗಳಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿದ್ದರೂ ನೀವು ಈ ಲೋಕಕ್ಕೆ ಸೇರಿದವರಂತೆ ವರ್ತಿಸುವುದೇಕೆ? ಈ ನಿಯಮಗಳನ್ನು ಏಕೆ ಅನುಸರಿಸುತ್ತಿರುವಿರಿ ಎಂಬುದೇ ನನ್ನ ಮಾತಿನ ಅರ್ಥ:


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು. ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”


ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದುಹಾಕುವರು. ಆದರೆ ಇಸ್ರೇಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.


ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ.


ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ.


ಭೂಪರಲೋಕಗಳಲ್ಲಿರುವ ಪ್ರತಿಯೊಂದು ಕುಟುಂಬವು ಆತನಿಂದ ತನ್ನ ನಿಜ ಹೆಸರನ್ನು ಪಡೆದುಕೊಳ್ಳುತ್ತದೆ.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.


ಆತನು ದೇವಾಲಯವನ್ನು ಕಟ್ಟುವನು ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.


ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.


ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು