Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:2 - ಪರಿಶುದ್ದ ಬೈಬಲ್‌

2 ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ತುಮಿ ಹ್ಯಾ ಜಗಾಚ್ಯಾ ಬುರ್ಶ್ಯಾ ವಾಟೆನ್ ಚಲ್ಲ್ಯಾಸಿ ಅನಿ ವಾರ್ಯಾ ವೈಲ್ಯಾ ಆತ್ಮಿಕ್ ಬಳಾಂಚ್ಯಾ ಅದಿಕಾರ್‍ಯಾಕ್ ಖಾಯ್ಲೆ ಹೊಲ್ಲ್ಯಾಸಿ, ತೊ ಬುರ್ಸೊ ಆತ್ಮೊ ಅತ್ತಾ ದೆವಾಕ್ ಖಾಯ್ಲ್ ಹೊವ್ನ್ ಚಲಿನಸಲ್ಲ್ಯಾ ಲೊಕಾಕ್ನಿ ಚಾಲ್ವುನ್ ನ್ಹೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:2
64 ತಿಳಿವುಗಳ ಹೋಲಿಕೆ  

ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.


ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.


ಈ ಲೋಕಕ್ಕೆ ತೀರ್ಪಾಗುವ ಕಾಲ ಇದೇ ಆಗಿದೆ. ಈಗ ಈ ಲೋಕದ ಅಧಿಪತಿಯನ್ನು (ಸೈತಾನ) ಹೊರಗೆ ದಬ್ಬಲಾಗುವುದು.


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ಏಕೆಂದರೆ ದೇವರಿಂದ ಹೊಸದಾಗಿ ಹುಟ್ಟಿರುವ ಪ್ರತಿಯೊಬ್ಬನೂ ಲೋಕದ ವಿರುದ್ಧ ಗೆಲ್ಲುವ ಶಕ್ತಿಯನ್ನು ಹೊಂದಿದ್ದಾನೆ.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


ನೀವು ಮೊದಲು ಈ ಸಂಗತಿಗಳ ಕುರಿತು ಅರ್ಥಮಾಡಿಕೊಳ್ಳದಿದ್ದ ಕಾರಣ, ನೀವು ನಿಮ್ಮ ಇಚ್ಛೆಯಂತೆ ಕೆಟ್ಟಕಾರ್ಯಗಳನ್ನು ಮಾಡಿದಿರಿ. ಆದರೆ ಈಗ ನೀವು ವಿಧೇಯರಾಗಿರುವ ದೇವಮಕ್ಕಳು, ಆದ್ದರಿಂದ ಈಗ ಮೊದಲಿನಂತೆ ಜೀವಿಸಬೇಡಿ.


ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.


ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.


ಒಂದು ಕಾಲದಲ್ಲಿ ನೀವು ದೇವರಿಂದ ಬೇರ್ಪಟ್ಟಿದ್ದಿರಿ, ದುಷ್ಕೃತ್ಯಗಳನ್ನು ಮಾಡುತ್ತಾ ನಿಮ್ಮ ಮನಸ್ಸುಗಳಲ್ಲಿ ದೇವರಿಗೆ ಶತ್ರುಗಳಾಗಿದ್ದಿರಿ.


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ಆದರೆ ಈ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಈ ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಆ ಜನರಿಂದ ದೂರವಿರಬೇಕಾದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ.


ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?


ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ.


ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.


ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.


ನ್ಯಾಯತೀರ್ಪಿನ ಕುರಿತಾದ ಸತ್ಯವನ್ನು ಆ ಸಹಾಯಕನು ಈ ಲೋಕಕ್ಕೆ ಸಾಧರಪಡಿಸುವನು, ಏಕೆಂದರೆ ಈ ಲೋಕದ ಅಧಿಪತಿಗೆ ಈಗಾಗಲೇ ನ್ಯಾಯತೀರ್ಪಾಗಿದೆ.


ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.


ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)


ಅದಕ್ಕೆ ಯೇಸು, “ನೀವು ಕೆಳಗಿನವರಾಗಿದ್ದೀರಿ. ನಾನಾದರೋ ಮೇಲಿನವನು. ನೀವು ಈ ಲೋಕದವರಾಗಿದ್ದೀರಿ. ಆದರೆ ನಾನು ಈ ಲೋಕದವನಲ್ಲ.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ಆ ಹೊಲ ಈ ಲೋಕವಾಗಿದೆ. ಒಳ್ಳೆಯ ಕಾಳುಗಳೇ ಪರಲೋಕರಾಜ್ಯಕ್ಕೆ ಸೇರಿದ ದೇವರ ಮಕ್ಕಳು. ಕೆಡುಕನಿಗೆ ಸಂಬಂಧಪಟ್ಟವರೇ ಹಣಜಿಗಳು.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ಅವನು ಒಂದೇ ಕಾಲದಲ್ಲಿ ಎರಡು ರೀತಿಯ ಸಂಗತಿಗಳನ್ನು ಯೋಚಿಸುತ್ತಾನೆ. ಅವನು ತಾನು ಮಾಡುವ ಯಾವುದೇ ಕಾರ್ಯದಲ್ಲಾಗಲಿ ಒಂದು ತೀರ್ಮಾನಕ್ಕೆ ಬರಲಾರನು. ಅಂಥವನು ತನಗೆ ಪ್ರಭುವಿನಿಂದ ಏನಾದರೂ ದೊರೆಯುತ್ತದೆ ಎಂದು ಯೋಚಿಸದಿರಲಿ.


ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.


ಬಳಿಕ ಪಟ್ಟಣದ ಅಧಿಕಾರಿಯು ಜನಸಮೂಹವನ್ನು ಶಾಂತಗೊಳಿಸಿ ಅವರಿಗೆ, “ಎಫೆಸದ ಜನರೇ, ಮಹಾದೇವತೆಯಾದ ಅರ್ತೆಮಿ ದೇವಿಯ ಗುಡಿಯನ್ನು ಎಫೆಸ ಪಟ್ಟಣವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ತಿಳಿದಿದೆ. ಆಕೆಯ ಪವಿತ್ರ ಕಲ್ಲನ್ನು ಸಹ ನಾವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ಗೊತ್ತಿದೆ.


“ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)


“ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.


ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.”


ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.


ನೀವು ಸುಳ್ಳುಹೇಳುವ ದುಷ್ಟಮಕ್ಕಳು. ನೀವು ನನ್ನನ್ನು ಪರಿಹಾಸ್ಯ ಮಾಡುತ್ತೀರಿ. ನನ್ನನ್ನು ಹಿಯಾಳಿಸುತ್ತೀರಿ; ನಿಮ್ಮ ನಾಲಿಗೆಯನ್ನು ನನ್ನತ್ತ ಚಾಚುತ್ತೀರಿ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ನಾನು ನೀತಿಮಾರ್ಗವನ್ನು ಬಿಟ್ಟುಹೋಗಿದ್ದರೆ, ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ,


ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


“ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.


ಆಗ ಇದ್ದಕ್ಕಿದಂತೆ ಮರುಭೂಮಿಯಿಂದ ಬಿರುಗಾಳಿ ಬೀಸಿದ್ದರಿಂದ ಮನೆಯು ನಿನ್ನ ಗಂಡು ಹೆಣ್ಣುಮಕ್ಕಳ ಮೇಲೆ ಕುಸಿದು ಬಿದ್ದಿತು; ಅವರೆಲ್ಲಾ ಸತ್ತುಹೋದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.


ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.


“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.


ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.


ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ.


ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)


ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.


ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.


ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೋ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ.


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಉಷ್ಟ್ರಪಕ್ಷಿ, ಉಲೂಕ, ಕಡಲ್ಹಕ್ಕಿ ಎಲ್ಲಾ ವಿಧವಾದ ಡೇಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು