ಎಫೆಸದವರಿಗೆ 2:7 - ಪರಿಶುದ್ದ ಬೈಬಲ್7 ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಈ ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆನಿ ಅಮ್ಕಾ ಕ್ರಿಸ್ತಾ ಜೆಜುಚ್ಯಾ ವೈನಾ ಹ್ಯಾ ಕಾಲಾರ್ ಅನಿ ಸಗ್ಳ್ಯಾ ಕಾಲಾರ್ ಯೆತಲ್ಯಾ ತೆಚ್ಯಾ ಸಾಂಗುಕ್ ಹೊಯ್ನಾ ತಸ್ಲ್ಯಾ ಮೊಟ್ಯಾಪಾನಾಚಿ ತೆಚಿ ಕುರ್ಪಾ ಅನಿ ಪ್ರೆಮ್ ದಾಕ್ವುನ್ ದಿವ್ ಸಾಟ್ನಿ ತೆನಿ ಅಸೆ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.