ಎಫೆಸದವರಿಗೆ 2:8 - ಪರಿಶುದ್ದ ಬೈಬಲ್8 ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಂಬಿಕೆಯ ಮೂಲಕ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ವರವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ಕುರ್ಪೆಕ್ ಲಾಗುನ್ ವಿಶ್ವಾಸಾಚ್ಯಾ ವೈನಾ ತುಮಿ ಬಚಾವ್ ಹೊಲ್ಯಾಸಿ ಹೆ ತುಮ್ಚ್ಯಾ ಸ್ವತಾಚ್ಯಾ ಬಳಾನ್ ನ್ಹಯ್, ಖರೆ ಹೆ ಎಕ್ ದೆವಾಚೆ ದೆನೆ ಹೊವ್ನ್ ಹಾಯ್, ತಸೆ ಮನುನ್ ಕೊನ್ಬಿ ತೆಚ್ಯಾ ವಿಶಯಾತ್ ಮೊಟೆಪಾನ್ ಬೊಲುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |
ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.