Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:1 - ಪರಿಶುದ್ದ ಬೈಬಲ್‌

1 ನಾನು ಕ್ರಿಸ್ತಯೇಸುವಿನ ಸೆರೆಯಾಳು. ಯೆಹೂದ್ಯರಲ್ಲದ ನಿಮಗೋಸ್ಕರ ನಾನು ಸೆರೆಯಾಳಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹ್ಯಾ ಕಾರಾನಾ ಸಾಟ್ನಿ ಪಾವ್ಲು ಮನ್ತಲೊ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು ತುಮ್ಚ್ಯಾ ಸಾಟ್ನಿ ಕ್ರಿಸ್ತಾಚೊ ಬಂಧಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:1
30 ತಿಳಿವುಗಳ ಹೋಲಿಕೆ  

ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.


ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.


ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ.


ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಯೇಸು ಕ್ರಿಸ್ತನ ನಿಮಿತ್ತ ಸೆರೆಯಲ್ಲಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನಾದ ಮತ್ತು ನಮ್ಮ ಜೊತೆಕೆಲಸದವನಾದ ಫಿಲೆಮೋನನಿಗೆ,


ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.


“ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.


ಕ್ರಿಸ್ತಯೇಸುವಿನ ನಿಮಿತ್ತ ನನ್ನೊಂದಿಗೆ ಸೆರೆಮನೆಯಲ್ಲಿರುವ ಎಪಫ್ರನು ವಂದನೆ ತಿಳಿಸಿದ್ದಾನೆ.


ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.


ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ.


ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.


ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.


ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ನನ್ನ ಸಹೋದರ ಸಹೋದರಿಯರೇ, ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನು ಬೋಧಿಸುವುದಿಲ್ಲ. ಸುನ್ನತಿಯ ಅಗತ್ಯತೆಯನ್ನು ಕುರಿತು ಉಪದೇಶಿಸುವವನಾಗಿದ್ದರೆ, ನಾನಿನ್ನೂ ಹಿಂಸೆಗೆ ಒಳಗಾಗಿರುವುದೇಕೆ? ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನಿನ್ನೂ ಉಪದೇಶಿಸುವುದಾಗಿದ್ದರೆ, ಶಿಲುಬೆಯ ವಿಷಯವಾದ ನನ್ನ ಬೋಧನೆಗೆ ಅಡ್ಡಿಯಾಗುವುದೇ ಇಲ್ಲ.


ಕೇಳಿ, ನಾನೇ ಪೌಲನು. ನೀವು ಸುನ್ನತಿ ಮಾಡಿಸಿಕೊಂಡು ಧರ್ಮಶಾಸ್ತ್ರಕ್ಕೆ ಹಿಂತಿರುಗಿಕೊಳ್ಳುವುದಾದರೆ ಕ್ರಿಸ್ತನಿಂದ ನಿಮಗೇನೂ ಪ್ರಯೋಜನವಿಲ್ಲ.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಅನಾದಿಕಾಲದಿಂದಲೂ ಇದೇ ದೇವರ ಯೋಜನೆಯಾಗಿತ್ತು. ದೇವರು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ತನ್ನ ಯೋಜನೆಗನುಸಾರವಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು