Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:12 - ಪರಿಶುದ್ದ ಬೈಬಲ್‌

12 ನಾವು ಕ್ರಿಸ್ತನಲ್ಲಿರುವ ನಂಬಿಕೆಯ ಮೂಲಕ ದೇವರ ಬಳಿಗೆ ಸ್ವತಂತ್ರದಿಂದ ಮತ್ತು ನಿರ್ಭಯದಿಂದ ಹೋಗಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇವರ ಸಾನ್ನಿಧ್ಯ ಸೇರುವದಕ್ಕೆ ನಮಗಿರುವ ಭರವಸವುಳ್ಳ ಧೈರ್ಯವು ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮ್ಕಾ ಜೆಜುಚ್ಯಾ ವೈರ್ ಹೊತ್ತ್ಯಾ ವಿಶ್ವಾಸಾ ವೈನಾ ಅಮಿ ಧರ್ಯ್ಯಾನ್, ಅನಿ ಬರೊಸ್ಯಾನ್ ದೆವಾಕ್ಡೆ ಜಾವ್ಕ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:12
12 ತಿಳಿವುಗಳ ಹೋಲಿಕೆ  

ಹೌದು, ಕ್ರಿಸ್ತನ ಮೂಲಕ ನಾವೆಲ್ಲರೂ ಒಬ್ಬ ಆತ್ಮನಿಂದ ನಮ್ಮ ತಂದೆಯಾದ ದೇವರ ಬಳಿಗೆ ಬರಲು ಶಕ್ತರಾಗಿದ್ದೇವೆ.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ನಾವು ಈ ಸಂಗತಿಗಳನ್ನು ಹೇಳಬಲ್ಲೆವು; ಏಕೆಂದರೆ ನಾವು ಕ್ರಿಸ್ತನ ಮೂಲಕ ದೇವರ ಸನ್ನಿಧಿಯಲ್ಲಿ ಭರವಸದಿಂದಿದ್ದೇವೆ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ನನ್ನ ಪ್ರಿಯ ಸ್ನೇಹಿತರೇ, ನಾವು ತಪ್ಪು ಮಾಡುತ್ತಿಲ್ಲ ಎಂದು ನಮಗೆ ತಿಳಿದಿದ್ದರೆ, ನಾವು ದೇವರ ಬಳಿಗೆ ಧೈರ್ಯವಾಗಿ ಬರಲು ಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು