ಎಫೆಸದವರಿಗೆ 3:19 - ಪರಿಶುದ್ದ ಬೈಬಲ್19 ಕ್ರಿಸ್ತನ ಪ್ರೀತಿಯನ್ನು ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆ ಪ್ರೀತಿಯನ್ನು ನೀವು ತಿಳಿದುಕೊಳ್ಳಶಕ್ತರಾಗಲೆಂದು ಪ್ರಾರ್ಥಿಸುತ್ತೇನೆ. ಆಗ ನೀವು ದೇವರ ಸಂಪೂರ್ಣತೆಯಿಂದ ತುಂಬಿದವರಾಗಲು ಸಾಧ್ಯವಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಜ್ಞಾನಕ್ಕೆ ಮೀರುವ ಕ್ರಿಸ್ತನ ಪ್ರೀತಿಯನ್ನು ತಿಳುಕೊಳ್ಳಲೂ ಪೂರ್ಣಶಕ್ತರಾಗಿದ್ದು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆ ಅಸೆ ಫುರಾ ಕಳ್ವುನ್ ಘೆವ್ಕ್ ಹೊಯ್ ನಸ್ಲ್ಯಾರ್ಬಿ ತೆಜೊ ಪ್ರೆಮ್ ತುಮ್ಕಾ ಕಳುಂದಿ ಅನಿ ಅಸೆ ತುಮ್ಕಾ ದೆವಾಚ್ಯಾ ಫುರಾ ಸ್ವಭಾವಾನ್ ಭರುಂದಿ. ಅಧ್ಯಾಯವನ್ನು ನೋಡಿ |
ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.