Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:6 - ಪರಿಶುದ್ದ ಬೈಬಲ್‌

6 ಇದು ಆ ರಹಸ್ಯಸತ್ಯ: ಯೆಹೂದ್ಯರಲ್ಲದವರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ಇರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹಕ್ಕೆ ಸೇರಿದವರೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:6
17 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.


ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.


ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ.


ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.


ಏಕೆಂದರೆ ನಾವು ಆತನ ದೇಹದ ಅಂಗಗಳಾಗಿದ್ದೇವೆ.


ಆದ್ದರಿಂದ ನೀವು ಅಂಥ ಜನರೊಂದಿಗೆ ಪಾಲುಗಾರರಾಗಬೇಡಿ.


ದೇಹವು ಒಂದೇ, ಆದರೆ ಅದು ಅನೇಕ ಅಂಗಗಳನ್ನು ಪಡೆದಿದೆ. ಹೌದು, ದೇಹದಲ್ಲಿ ಅನೇಕ ಅಂಗಗಳಿವೆ, ಆದರೆ ಆ ಎಲ್ಲಾ ಅಂಗಗಳಿಂದ ಒಂದೇ ಒಂದು ದೇಹವು ರೂಪಿತವಾಗುತ್ತದೆ. ಅಂತೆಯೇ ಕ್ರಿಸ್ತನು.


ನೀವು ಇದನ್ನು ಸ್ವಂತ ಸ್ವಾಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ದೇವರು ತನ್ನ ರಹಸ್ಯವಾದ ಯೋಜನೆಯನ್ನು ನನಗೆ ತಿಳಿಸಿದನು ಮತ್ತು ತೋರಿಸಿದನು. ಇದರ ಬಗ್ಗೆ ನಾನು ಆಗಲೇ ನಿಮಗೆ ಸ್ವಲ್ಪ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು