ಎಫೆಸದವರಿಗೆ 3:7 - ಪರಿಶುದ್ದ ಬೈಬಲ್7 ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಉಚಿತಾರ್ಥವಾಗಿ ಅನುಗ್ರಹಿಸಿದ ಕೆಲಸವನ್ನನುಸರಿಸಿ ನಾನು ಈ ಸುವಾರ್ತೆಗೆ ಸೇವಕನಾದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರ ಶಕ್ತಿಯ ಕ್ರಿಯೆಯಿಂದ ನನಗೆ ಕೊಡಲಾದ ಅವರ ದೇವ ಕೃಪಾದಾನಕ್ಕೆ ಅನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ದೆವಾಚ್ಯಾ ವಿಶೆಸ್ ದೆನ್ಯಾ ವೈನಾ ಮಾಕಾ ಬರ್‍ಯಾ ಖಬ್ರೆಚೊ ಸೆವಕ್ ಕರುನ್ ಹೊಲೆ, ಹೆ ತೆನಿ ಮಾಕಾ ಅಪ್ನಾಚ್ಯಾ ಕಾಮಾ ಕರ್ತಲ್ಯಾ ಬಳಾ ವೈನಾ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.