ಎಫೆಸದವರಿಗೆ 3:9 - ಪರಿಶುದ್ದ ಬೈಬಲ್9 ರಹಸ್ಯವಾಗಿದ್ದ ತನ್ನ ಯೋಜನೆಯನ್ನು ಜನರೆಲ್ಲರಿಗೆ ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು. ಆದಿಯಿಂದಲೂ ಅದು ದೇವರಲ್ಲಿ ಮರೆಯಾಗಿತ್ತು. ಪ್ರತಿಯೊಂದನ್ನೂ ಸೃಷ್ಟಿಸಿದಾತನು ದೇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅನಿ ಸಗ್ಳ್ಯಾ ಲೊಕಾಕ್ನಿ ದೆವಾಚಿ ಗುಟ್ಟಾಚಿ ಯೆವ್ಜನ್ ಕಸ್ಲಿ ಮನುನ್ ಅನಿ ತಿ ಪರಿನಾಮ್ ಪಡಿಸಾರ್ಕೆ ಹೊತೆಲೆ ಬಗಿಸಾರ್ಕೆ ಕರ್ಲ್ಯಾನ್. ಸಗ್ಳ್ಯೆ ರಚಲ್ಯಾ ದೆವಾನ್ ಅದ್ಲ್ಯಾ ಸಗ್ಳ್ಯಾ ಎಳಾತ್ನಿ ಅಪ್ನಾಚೊ ಗುಟ್ ಧಾಪುನ್ ಥವ್ಲ್ಯಾನ್. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.