ಎಫೆಸದವರಿಗೆ 4:1 - ಪರಿಶುದ್ದ ಬೈಬಲ್1 ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತೆಚ್ಯಾ ಸಾಟ್ನಿ ಧನಿಯಾ ಸಾಟ್ನಿ ಬಂಧಿತ್ ಹೊತ್ತೊ ಮಿಯಾ ದೆವಾನ್ ತುಮ್ಕಾ ಬಲ್ವನಿಚ್ಯಾ ಮಟ್ಟಾಚೆ ಜಿವನ್ ತುಮಿ ಕರುಚೆ ಮನುನ್ ತುಮ್ಚ್ಯಾಕ್ಡೆ ಮಾಗ್ತಾ. ಅಧ್ಯಾಯವನ್ನು ನೋಡಿ |
ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.