Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:13 - ಪರಿಶುದ್ದ ಬೈಬಲ್‌

13 ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವೆಲ್ಲರು ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯವನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯೆಂಬ ಪ್ರಮಾಣವನ್ನು ಮುಟ್ಟುವ ತನಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ಅಸೆ ಅಮ್ಚ್ಯಾ ವಿಶ್ವಾಸಾತ್ ಅನಿ ದೆವಾಚ್ಯಾ ಲೆಕಾಚ್ಯಾ ಶಾನೆಪಾನಾತ್ ಎಕಾಕ್ಡೆ ಗೊಳಾ ಹೊವ್ನ್ ಅಮಿ ಸಗ್ಳೆ ಎಕ್ ಹೊವ್ಚೆ, ಅಮಿ ವಾಡ್ವಳ್ಕಿ ಹೊಲ್ಲಿ ಲೊಕಾ ಹೊವ್ಚೆ ಅನಿ ಕ್ರಿಸ್ತಾಚ್ಯಾ ಸಗ್ಳ್ಯಾ ಸಂಪುರ್ನತೆಚ್ಯಾ ಹಂತಾಕ್ ಪಾವುಚೆ ಮನುನ್ ತೆನಿ ಅಸೆ ಕರ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:13
34 ತಿಳಿವುಗಳ ಹೋಲಿಕೆ  

ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.


ಒಬ್ಬನೇ ಪ್ರಭು, ಒಂದೇ ನಂಬಿಕೆ, ಒಂದೇ ದೀಕ್ಷಾಸ್ನಾನ.


ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ.


ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.


ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.


ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.


ಸಭೆಯು ಕ್ರಿಸ್ತನ ದೇಹವಾಗಿದೆ. ಸಭೆಯು ಕ್ರಿಸ್ತನಿಂದ ಆವರಿಸಲ್ಪಟ್ಟಿದೆ. ಆತನು ಸಮಸ್ತವನ್ನು ಪ್ರತಿಯೊಂದು ವಿಷಯದಲ್ಲಿಯೂ ಸಂಪೂರ್ಣಗೊಳಿಸುತ್ತಾನೆ.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.


ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.


ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.


ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.


ನನ್ನ ಪ್ರಿಯ ಮಕ್ಕಳೇ, ಪ್ರಸವವೇದನೆಪಡುವ ತಾಯಿಯಂತೆ ನಾನು ನಿಮ್ಮ ವಿಷಯದಲ್ಲಿ ನೋವುಳ್ಳವನಾಗಿದ್ದೇನೆ. ನೀವು ನಿಜವಾಗಿಯೂ ಕ್ರಿಸ್ತನಂತಾಗುವ ತನಕ ನನಗೆ ಈ ನೋವಿರುತ್ತದೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ.


ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು