ಎಫೆಸದವರಿಗೆ 4:15 - ಪರಿಶುದ್ದ ಬೈಬಲ್15 ನಾವಾದರೊ ಸತ್ಯವನ್ನು ಪ್ರೀತಿಯಿಂದ ಹೇಳಬೇಕು; ಎಲ್ಲಾ ವಿಷಯಗಳಲ್ಲಿಯೂ ಬೆಳೆದು ಕ್ರಿಸ್ತನಂತಾಗಲು ಪ್ರಯತ್ನಿಸಬೇಕು. ಕ್ರಿಸ್ತನು ಶಿರಸ್ಸಾಗಿದ್ದಾನೆ ಮತ್ತು ನಾವು ದೇಹವಾಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪ್ರೀತಿಯಿಂದ ಸತ್ಯವನ್ನನುಸರಿಸುತ್ತಾ ಬೆಳೆದು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ಐಕ್ಯವನ್ನು ಹೊಂದುತ್ತಾ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಹೆಚ್ಯಾ ಬದ್ಲಾಕ್ ಪ್ರೆಮಾನ್ ಭರಲ್ಲ್ಯಾ ಆತ್ಮ್ಯಾಕ್ ಖರೆ ಹೊತ್ತೆ ಬೊಲುನ್ ಟಕ್ಲೆ ಹೊವ್ನ್ ಹೊತ್ತ್ಯಾ ಕ್ರಿಸ್ತಾತ್ ಸಗ್ಳ್ಯಾ ವಾಟೆನಿ ವಾಡ್ವಳ್ಕಿ ಹೊವ್ಚೆ. ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.