Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:16 - ಪರಿಶುದ್ದ ಬೈಬಲ್‌

16 ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನೇ ಶಿರಸ್ಸು; ದೇಹವೆಲ್ಲಾ ಆತನ ದೊರೆತನದಲ್ಲಿದ್ದು ತನ್ನಲ್ಲಿರುವ ಎಲ್ಲಾ ನರಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯ ಹೊಂದಿ ಪ್ರೀತಿಯಿಂದ ಐಕ್ಯವಾಗಿದ್ದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚ್ಯಾ ಚಾಲ್ವುನ್ಕಿತ್ ದುಸ್ರಿ ದುಸ್ರಿ ಭಾಗಾ ಎಕ್ ಆಂಗ್ ಹೊವ್ನ್ ಮಿಳುನ್ ಹಾತ್ ಅನಿ ಅಂಗಾಚಿ ಸಗ್ಳಿ ಸಂದಾ ಎಕಾಮೆಕಾಕ್ ಎಕ್ ಹೊವ್ನ್ ಜೊಡಲಿ ಹಾತ್ ಅಸೆ ಹರಿ ಎಕ್ ಎಗ್ಳೊ ಭಾಗಾನ್ ಅಪ್ನಾಚೆ ಕಾಮ್ ಕರ್ಲ್ಯಾರ್, ಸಗ್ಳೆ, ಆಂಗುಚ್ ವಾಡ್ತಾ ಅನಿ ಪ್ರೆಮಾಚ್ಯಾ ವೈನಾ ಅಪ್ನಾಕುಚ್ ಗಟ್ಟ್ ಬಾಂಧುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:16
28 ತಿಳಿವುಗಳ ಹೋಲಿಕೆ  

ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.


“ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.


ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ.


ನಾವಾದರೊ ಸತ್ಯವನ್ನು ಪ್ರೀತಿಯಿಂದ ಹೇಳಬೇಕು; ಎಲ್ಲಾ ವಿಷಯಗಳಲ್ಲಿಯೂ ಬೆಳೆದು ಕ್ರಿಸ್ತನಂತಾಗಲು ಪ್ರಯತ್ನಿಸಬೇಕು. ಕ್ರಿಸ್ತನು ಶಿರಸ್ಸಾಗಿದ್ದಾನೆ ಮತ್ತು ನಾವು ದೇಹವಾಗಿದ್ದೇವೆ.


ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ನಿಮಗಾಗಿ ನಾನು ಪ್ರಾರ್ಥಿಸುವುದೇನೆಂದರೆ: ನೀವು ಪ್ರೀತಿಯಲ್ಲಿ ವೃದ್ಧಿಯಾಗುತ್ತಾ ಜ್ಞಾನವಂತರೂ ತಿಳುವಳಿಕೆಯುಳ್ಳವರೂ ಆಗಬೇಕು.


ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ.


ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.


ನಾವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ಪ್ರೀತಿಯು ವೃದ್ಧಿಯಾಗಿ ಒಬ್ಬೊಬ್ಬರ ಮೇಲೆಯೂ ಇತರ ಜನರೆಲ್ಲರ ಮೇಲೆಯೂ ಹೆಚ್ಚಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ಪ್ರತಿಯೊಬ್ಬರಿಗೂ ಒಂದು ದೇಹವಿದೆ. ಆ ದೇಹಕ್ಕೆ ಅನೇಕ ಅಂಗಾಂಗಗಳಿವೆ. ಆ ಅಂಗಾಂಗಗಳು ಒಂದೇ ಕಾರ್ಯವನ್ನು ಮಾಡುವುದಿಲ್ಲ.


ರೊಟ್ಟಿಯು ಒಂದೇ. ಆದ್ದರಿಂದ ನಮ್ಮಲ್ಲಿ ಅನೇಕರಿದ್ದರೂ ನಾವು ಒಂದೇ ದೇಹವಾಗಿದ್ದೇವೆ. ಯಾಕೆಂದರೆ ನಾವೆಲ್ಲಾ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು