Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:21 - ಪರಿಶುದ್ದ ಬೈಬಲ್‌

21 ನೀವು ಆತನ ವಿಷಯವಾಗಿ ಕೇಳಿದ್ದೀರೆಂಬುದು ನನಗೆ ಗೊತ್ತಿದೆ. ನೀವು ಆತನಲ್ಲಿರುವುದರಿಂದ ಸತ್ಯವನ್ನು ಕಲಿತುಕೊಂಡಿರಿ. ಹೌದು, ಸತ್ಯವು ಯೇಸುವಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರ ವಿಷಯವಾಗಿ ನೀವು ಕೇಳಿದ್ದು ಮತ್ತು ಕಲಿತದ್ದು ಅವರಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶವನ್ನು ಹೊಂದಿದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್, ತುಮಿ ತೆಚ್ಯಾ ವಿಶಯಾತ್ ಆಯ್ಕಲ್ಯಾಸಿ ಮನ್ತಲೆ ಮಾಕಾ ಗೊತ್ತ್ ಹಾಯ್, ತುಮಿ ತೆಜ್ಯಾಕ್ಡೆ ಹೊತ್ತ್ಯಾ ಸಾಟ್ನಿ ಖರೆಪಾನ್ ಶಿಕುನ್ ಘೆಟ್ಲ್ಯಾಸಿ, ಹೊಯ್ ಖರೆಪಾನ್ ಜೆಜುಕ್ಡೆಚ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:21
20 ತಿಳಿವುಗಳ ಹೋಲಿಕೆ  

ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.


ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.


ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.


ಈ ವಿಷಯದಲ್ಲಿ ನಾನು ಹೆಮ್ಮೆಪಡುವುದನ್ನು ಅಖಾಯದಲ್ಲಿರುವ ಯಾರೂ ನಿಲ್ಲಿಸಲಾರರು. ಕ್ರಿಸ್ತನ ಸತ್ಯವು ನನ್ನೊಳಗಿರುವುದರಿಂದ ಇದನ್ನು ಹೇಳುತ್ತಿದ್ದೇನೆ.


ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.


ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?


ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು.


ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು