Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:24 - ಪರಿಶುದ್ದ ಬೈಬಲ್‌

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ತುಮ್ಕಾಚ್ ತುಮಿ ನ್ಹವ್ಯಾ ಸ್ವಭಾವಾನ್ ನೆಸುನ್ ಘೆವಾ, ತೊ ಸ್ವಬಾವ್ ದೆವಾಚ್ಯಾ ರುಪಾಕ್ ಖರಿ ನಿತ್ ಹೊವ್ನ್ ಪವಿತ್ರ್ ಹೊವ್ನ್ ತಯಾರ್ ಕರಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:24
30 ತಿಳಿವುಗಳ ಹೋಲಿಕೆ  

ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.


ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು.


ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.


“ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಹೊಸದಾಗಿ ಹುಟ್ಟಿದ ಕೂಸುಗಳಂತಿರಿ. ನಿಮ್ಮ ಆತ್ಮವನ್ನು ಪೋಷಿಸುವಂಥ ಶುದ್ಧ ಹಾಲನ್ನು (ದೇವರ ವಾಕ್ಯವೆಂಬ) ಬಯಸಿರಿ. ನೀವು ಅದನ್ನು ಕುಡಿಯುವುದರಿಂದ ಬೆಳವಣಿಗೆ ಹೊಂದಿ ರಕ್ಷಿಸಲ್ಪಡುವಿರಿ.


ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.


ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು.


ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.


ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.


ಅಳಿದುಹೋಗುವ ಈ ದೇಹವು ಅಳಿದುಹೋಗದ್ದನ್ನು ಧರಿಸಿಕೊಳ್ಳುವುದು. ಮರಣಾಧೀನವಾದ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.


ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು.


ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.


ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.


ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು