ಎಫೆಸದವರಿಗೆ 4:25 - ಪರಿಶುದ್ದ ಬೈಬಲ್25 ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆ ಹೊವ್ನ್, ತುಮಿ ಝುಟೆ ಸಾಂಗಿನಸ್ತಾನಾ ಎಕಾಮೆಕಾಕ್ ಕನ್ನಾಬಿ ಖರೆಚ್ ಬೊಲುನ್ಗೆತ್ ರಾವಾ, ಕಶ್ಯಾಕ್ ಮಟ್ಲ್ಯಾರ್ ಅಮಿ ಸಗ್ಳ್ಯೆಬಿ ಎಕುಚ್ ಆಂಗಾಚಿ ಭಾಗಾ ಹೊವ್ನ್ ಹಾತ್. ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.